ಬೆಂಗಳೂರು: ರಾಜ್ಯದ 6 ಸಚಿವರು 66 ವಿಧಾನಸಭಾ ಸದಸ್ಯರು ಹಾಗೂ 28 ವಿಧಾನ ಪರಿಷತ್ ಸದಸ್ಯರು ತಮ್ಮ ಆಸ್ತಿಯ ವಿವರಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬುದಾಗಿ ಪಟ್ಟಿ ಬಿಡುಗಡೆ ಮಾಡಿದೆ.
ಈ ಬಗ್ಗೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಅಧಿನಿಯಮ)ರ ಕಲಂ 22(1), ಕಲಂ 7ರ ಉಪ ಕಲಂ (1)ರಲ್ಲಿ ಉಲ್ಲೇಖಿಸಿರುವ ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರನು 30ನೇ ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ತನ್ನ ಮತ್ತು ತನ್ನ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂದು ಅಧ್ಯಾದೇಶಿಸುತ್ತದೆ ಎಂದಿದೆ.
ಮೇಲ್ಕಂಡ ವಿವರಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ವೈಫಲ್ಯತೆ ಉಂಟಾದಲ್ಲಿ, ಈ ಅಧಿನಿಯಮದಲ್ಲಿ ನಿಗದಿಪಡಿಸಿರುವಂತೆ ಆಸ್ತಿ ಮತ್ತು ದಾಯಿತೃಗಳ ವಿವರಣಾ ಪಟ್ಟಿಯ ಸಲ್ಲಿಸದಿರುವಿಕೆಯ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಲೋಕಾಯುಕ್ತರು ವರದಿ ಮಾಡಬೇಕೆಂದು ಅಧಿನಿಯಮದ ಕಲಂ 22(2)ರಲ್ಲಿ ಅಧ್ಯಾದೇಶಿಸಲಾಗಿದೆ. ಅದರಂತೆ ಸಂಬಂಧಪಟ್ಟ ಸಾರ್ವಜನಿಕ ನೌಕರನಿಗೆ ಆ ವರದಿಯ ಪ್ರತಿಯನ್ನು ಕಳುಹಿಸುವುದೂ ಕೂಡಾ ಅವಶ್ಯಕವಾಗಿರುತ್ತದೆ. ಸಂಬಂಧಪಟ್ಟ ಸಾರ್ವಜನಿಕ ನೌಕರನಿಗೆ ಅಧಿನಿಯಮದ ಕಲಂ 22(1) ರಲ್ಲಿರುವಂತೆ ಮೇಲ್ಕಂಡ ವರದಿಯನ್ನು ಕಳುಹಿಸಿದ್ದಾಗಿಯೂ ಅಂತಹ ವರದಿಯನ್ನು ಕಳುಹಿಸಿದ ಎರಡು ತಿಂಗಳೊಳಗೆ ಸಂಬಂಧಪಟ್ಟ ಸಾರ್ವಜನಿಕ ನೌಕರರು ಅಧಿನಿಯಮದ ಕಲಂ 22(2) ಅನ್ನು ಪಾಲಿಸುವಲ್ಲಿ ವಿಫಲನಾದಲ್ಲಿ, ಲೋಕಾಯುಕ್ತರು ಅಂತಹ ತಪ್ಪಿತಸ್ಥ ಸಾರ್ವಜನಿಕ ನೌಕರರ ಹೆಸರುಗಳನ್ನು ರಾಜ್ಯದಲ್ಲಿ ಪಚಲಿತವಾಗಿರುವ ಮೂರು ವೃತ್ತಪತ್ರಿಕೆಗಳಲ್ಲಿ ಪುಕಟಿಸಬಹುದು ಅಥವಾ ಪುಕಟಿಸುವಂತೆ ಮಾಡಬಹುದು ಎಂದು ಹೇಳಇದೆ.
ಅಧಿನಿಯಮದ ಕಲಂ 22ರಲ್ಲಿ ಉಲ್ಲೇಖಿಸಿರುವ ಸಾರ್ವಜನಿಕ ನೌಕರ ಎಂಬ ವ್ಯಾಖ್ಯಾನದ ಅಡಿಯಲ್ಲಿ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಎಲ್ಲಾ ಸದಸ್ಯರೂ ಸೇರಿರುತ್ತಾರೆ. ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿರುವ ದಿನಾಂಕ 28/08/2025 ರ ವರದಿಯ ಪ್ರತಿ ಈ ಕೆಳಕಂಡ ಸಾರ್ವಜನಿಕ ನೌಕರರಿಗೆ ಜಾರಿಯಾಗಿದ್ದಾಗ್ಯೂ, ಸಕ್ಷಮ ಪ್ರಾಧಿಕಾರಕ್ಕೆ ವರದಿಯನ್ನು ಸಲ್ಲಿಸಿದ ಎರಡು ತಿಂಗಳುಗಳೊಳಗಾಗಿ ಸದರಿ ಸಾರ್ವಜನಿಕ ನೌಕರರು 2024-25ನೇ ಸಾಲಿನ ತಮ್ಮ ಆಸ್ತಿ ಮತ್ತು ದಾಯಿತ್ವಗಳ ವಿವರಣಾ ಪಟ್ಟಿಯನ್ನು ಸಲ್ಲಿಸಲು ವಿಫಲರಾಗಿರುವುದರಿಂದ ಅವರ ಹೆಸರುಗಳನ್ನು ಅಧಿನಿಯಮದ ಕಲಂ 22ರ ಉಪ ಕಲಂ (2) ರಂತೆ ಈ ಮೂಲಕ ಮೂರು ವೃತ್ತಪತ್ರಿಕೆಗಳಲ್ಲಿ ಪುಕಟಿಸಲಾಗಿದೆ ಎಂದಿದೆ.
ಹೀಗಿದೆ 2024-25 ನೇ ವರ್ಷಕ್ಕೆ ಸಂಬಂಧಿಸಿದ ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದೇ ಇರುವ ವಿಧಾನಸಭಾ ಸದಸ್ಯರುಗಳ ಪಟ್ಟಿ




ಕಬ್ಬು ಬೆಳೆಗಾರರ ಬಗ್ಗೆ ಕಾಳಜಿಯಿದ್ದರೇ ಪ್ರತಿ ಟನ್ ಗೆ 500 ರೂ ಸಹಾಯಧನ ನೀಡಿ: ಆರ್.ಅಶೋಕ್ ಆಗ್ರಹ
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ








