ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ… pic.twitter.com/9WMi0ag1xq
— DIPR Karnataka (@KarnatakaVarthe) November 6, 2025
ವಿಶ್ವದಲ್ಲೇ ದೊಡ್ಡದಾದ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. 2000 ಜನ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೆ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಗೃಹಲಕ್ಷ್ಮಿ ಸೊಸೈಟಿ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮಿ ಯಶಸ್ಸಿಗೆ ಯಾವ ರೀತಿ ಎಲ್ಲರೂ ಶ್ರಮ ವಹಿಸಿದ್ದೀರೋ ಹಾಗೆಯೇ ಗೃಹಲಕ್ಷ್ಮಿ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾ ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ದ್ವಿತೀಯ PU ಪರೀಕ್ಷೆ ಫೆ.28ರಿಂದ, SSLC ಪರೀಕ್ಷೆ ಮಾ.18, 2026ರಿಂದ ಆರಂಭ
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ








