ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ನ ಒಂದು ವರ್ಷದ ಸ್ಮರಣಾರ್ಥ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ‘ವಂದೇ ಮಾತರಂ’ ಎಂಬ ಶಬ್ದವು ನಮ್ಮ ವರ್ತಮಾನದಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ, ಸಾಧಿಸಲಾಗದ ಯಾವುದೇ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ ಎಂದು ಅವರು ಹೇಳಿದರು.
‘ವಂದೇ ಮಾತರಂ’ ನಮಗೆ ಹೊಸ ಸ್ಫೂರ್ತಿ ನೀಡುತ್ತದೆ: ಪ್ರಧಾನಿ ಮೋದಿ
“ನಾವು ಇಂದು ‘ವಂದೇ ಮಾತರಂ’ 150 ನೇ ವರ್ಷವನ್ನು ಆಚರಿಸುತ್ತಿದ್ದೇವೆ; ಇದು ನಮಗೆ ಹೊಸ ಸ್ಫೂರ್ತಿಯನ್ನು ನೀಡುತ್ತದೆ, ದೇಶದ ಜನರಿಗೆ ಹೊಸ ಶಕ್ತಿಯನ್ನು ತುಂಬುತ್ತದೆ” ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು








