ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಸರಗೂರು ತಾಲೂಕಿನ ಹಳೆ ಹೆಗ್ಗೋಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಲಿಯಾಗಿದ್ದಾನೆ. 8ತಿಂಗಳ ಹಿಂದೆ ಆನೆ ದಾಳಿಯಿಂದ ತಪ್ಪಿಸಿಕೊಂಡಿದ್ದ ರೈತ ಇಂದು ಹುಲಿ ದಾಳಿಗೆ ಬಲಿಯಾಗಿದ್ದಾನೆ.
ಹುಲಿ ದಾಳಿಯಿಂದ ಚೌಡಯ್ಯ (58) ಎನ್ನುವ ರೈತ ಸ್ಥಳದಲ್ಲಿ ಸಾವನಪ್ಪಿದ್ದು, ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಹುಲಿ ದಾಳಿಗೆ ರೈತನೊಬ್ಬ ಬಳಿ ಹಾಕಿದ್ದ ಘಟನೆ ನಡೆದಿತ್ತು ಈ ಒಂದು ಘಟನೆ ಮಾಸುವ ಮುನ್ನವೇ ಮತ್ತೊಬ್ಬ ರೈತ ಹುಲಿ ದಾಳಿಗೆ ಸಾವನಪ್ಪಿದ್ದಾನೆ.








