ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಂದ ಬೆಲೆ ನಿಗದಿ ಸಂಬಂಧ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ತೀವ್ರಗೊಂಡಿದ್ದು, ಉದ್ರಿಕ್ತರಿಂದ ಪೊಲೀಸರು, ಪೊಲೀಸ್ ವಾಹನಗಳು, ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಪಟನಾ ನಿರತ ಹಲವು ರೈತರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯಲ್ಲಿ ಕಬ್ಬಿಗೆ ಬೆಲೆ ನಿಗದಿಗಾಗಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ನಡೆಸಲಾಗುತ್ತಿದ್ದಂತ ಪ್ರತಿಭಟನೆಯು, ಇಂದು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ಸಾಗುವಂತ ವಾಹನಗಳ ಮೇಲೆ ಪ್ರತಿಭಟನಾ ನಿರತರ ರೈತರು ಕಲ್ಲು ತೂರಾಟ ನಡೆಸಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ.
ಇನ್ನೂ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರು, ಪೊಲೀಸ್ ವಾಹನಗಳು ಹಾಗೂ ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಉದ್ರಿಕ್ತ ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಜೊತೆಗೆ ಕಲ್ಲು ತೂರಾಟ ನಡೆಸಿದಂತ ಹಲವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಸಿಎಂ ಸಿದ್ಧರಾಮಯ್ಯ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ: HDK








