ಬೆಂಗಳೂರು : ಶಾಸಕ ಸತೀಶ್ ಸೈಲ್ ಗೆ ಬಿಗ್ ಶಾಕ್ ಎನ್ನುವಂತೆ ಬೆಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ್ದಂತ ಮಧ್ಯಂತ ಜಾಮೀನನ್ನು ರದ್ದುಗೊಳಿಸಲಾಗಿದೆ. ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್.25ರಂದು ಹೈಕೋರ್ಟ್ ಶಾಸಕ ಸತೀಶ್ ಸೈಲ್ ಗೆ ಜಾಮೀನು ಮಂಜೂರು ಮಾಡಿತ್ತು.
ಅನಾರೋಗ್ಯಕ್ಕೆ ಚಿಕಿತ್ಸೆ ಕಾರಣಕ್ಕಾಗಿ ಈ ಜಾಮೀನು ಮಂಜೂರು ಮಾಡಲಾಗಿತ್ತು. ಇಂದಿನವರೆಗೆ ಜಾಮೀನು ವಿಸ್ತರಣೆ ಕೂಡ ಆಗಿತ್ತು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಅವರಿಗೆ ನೀಡಿದ್ದಂತ ಮಧ್ಯಂತರ ಜಾಮೀನು ರದ್ದುಗೊಳಿಸಿದೆ. ಹೀಗಾಗಿ ಶಾಸಕ ಸತೀಶ್ ಸೈಲ್ ಮತ್ತೆ ಜೈಲುಪಾಲಾಗಲಿದ್ದಾರೆ ಎನ್ನಲಾಗುತ್ತಿದೆ.








