ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ MLCಸಿಟಿ ರವಿ ಅವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹೌದು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಲವು ದಿನಗಳ ಹಿಂದೆ ಫೋನ್ ನಲ್ಲಿ ಮಾತನಾಡುವಾಗ ಕಾರ್ಯಕ್ರಮ ಒಂದಕ್ಕೆ ಬರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತಿನ ಭರದಲ್ಲಿ ಸವಿತಾ ಸಮಾಜದ ಕುರಿತು ಅವಹೇಳನಕಾರಿ ಪದ ಬಳಸಿದ್ದರು. ಬಳಿಕ ಸವಿತಾ ಸಮಾಜದವರ ಕ್ಷಮೆ ಕೂಡ ಸಿಟಿ ರವಿ ಕೇಳಿದರು. ಆದರೆ ಇದೀಗ ಮಡಿವಾಳ ಪೊಲೀಸ್ ಠಾಣೆಯಲ್ಲಿ ಸಿ ಟಿ ರವಿ ವಿರುದ್ಧ FIR ದಾಖಲಾಗಿದೆ.
ಕಾಂಗ್ರೆಸ್ ಮುಖಂಡ ಮುರುಗೇಶ್ ಮೊದಲಿಯಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 27 ರಂದು ಎಂಎಲ್‌ಸಿ ಸಿಟಿ ರವಿ ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದಾಗ ಹೇಳಿಕೆ ನೀಡಿದ್ದರು. ಪ್ರಕರಣ ನಡೆದಿರುವುದು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗಾಗಿ ಶೂನ್ಯ FIR ಮಾಡಿ ಪೊಲೀಸರು ಕೇಸ್ ವರ್ಗಾಯಿಸಲಿದ್ದಾರೆ.








