ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಅನಿಕೇತ್ ಕುಮಾರ್ (12) ಹಾಗೂ ರೆಹಮದ್ ಬಾಬಾ (11) ಮೃತ ಬಾಲಕರು ಎಂದು ತಿಳಿದು ಬಂದಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಮರದ ಬಾಲಕರ ಪೋಷಕರು ನಿನ್ನೆ ಸಂಜೆ ಮನೆ ಬಳಿ ಆಟವಾಡುತ್ತಾ ಮಕ್ಕಳು ಕೆರೆಯ ಬಳಿ ತೆರಳಿದ್ದಾರೆ, ಈ ವೇಳೆ ಕೆರೆಗೆ ಇಳಿದಿದ್ದ ಮಕ್ಕಳು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ,. ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಭಂದ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








