ಬೆಂಗಳೂರು: ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಂಧ್ಯಾ ಎನ್ನುವವರ ಜೊತೆಗೆ ಉಗ್ರಂ ಮಂಜು ನಿಶ್ಚಿತಾರ್ಥ ಸದ್ದಿಲ್ಲದೇ ನೆರವೇರಿದೆ.
ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಹಾಗೂ ನಟ ಉಗ್ರಂ ಮಂಜು ನಿಶ್ಚಿತಾರ್ಥ ಸದ್ದಿಲ್ಲದೇ ನೆರವೇರಿದೆ. ಸಂಧ್ಯಾ ಎಂಬುವರ ಕೈಯನ್ನು ಉಗ್ರಂ ಮಂಜು ಇಂದು ಸರಳವಾಗಿ ಹೂ ಮುಡಿಸುವ ಮೂಲಕ ಶಾಸ್ತ್ರದ ಜೊತೆಗೆ ನಿಶ್ಚಿತಾರ್ಥವನ್ನು ನೆರವೇರಿಸಿದ್ದಾರೆ.
ಬೆಂಗಳೂರಿನ ಪೀಣ್ಯದಲ್ಲಿ ಕುಟುಂಬಸ್ಥರು ಹಾಗೂ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ನಟ ಉಗ್ರಂ ಮಂಜು ಹಾಗೂ ಸಂಧ್ಯಾ ನಿಶ್ಚಿತಾರ್ಥ ನೆರವೇರಿದೆ. 2026ರ ಜನವರಿಯಲ್ಲಿ ಉಗ್ರಂ ಮಂಜು ಹಾಗೂ ಸಂಧ್ಯಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಇದೀಗ ಇವರಿಬ್ಬರ ನಿಶ್ಚಿತಾರ್ಥದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
BIG NEWS: ‘ಕಾಡಾನೆ ಭೀಮ’ ಸೆರೆ ಕಾರ್ಯಾಚರಣೆ ವೇಳೆ ಒಂದು ‘ದಂತ ಕಟ್’: ಉಪಟಳ ನೀಡ್ತಿದ್ದ ‘ಆನೆ ನರಳಾಟ’
BREAKING: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು








