ಹರಿಯಾಣ: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿ ಸಿಗೆ ಪ್ರತಿಷ್ಠಿತ ರಾಷ್ಡ್ರೀಯ ಪ್ರಶಸ್ತಿ -2025 ರ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಸರ್ಕಾರದ ವಸತಿ ಮತ್ರು ನಗರಾಭಿವೃದ್ಧಿ ಸಚಿವಾಲಯದ Award of Excellence in Urban Transport ಪ್ರಶಸ್ತಿಯ ಗೌರವ ಸಂದಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ ಬಂದಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮ ಮಾಹಿತಿ ನೀಡಿದ್ದು, THE STATE, WHICH HAS IMPLEMENTED BEST URBAN TRANSPORT PROJECTS DURING THE PREVIOUS YEAR ವರ್ಗದಲ್ಲಿ ನಿಗಮದ ಮೈಸೂರು ನಗರ ಸಾರಿಗೆಯ ಧ್ವನಿಸ್ಪಂದನ ಉಪಕ್ರಮಕ್ಕೆ ಭಾರತ ಸರ್ಕಾರದ ಪ್ರಶಸ್ತಿ ಲಭಿಸಿದೆ ಎಂದಿದೆ.
ಕೆಎಸ್‌ಆರ್‌ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್* ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಿದೆ.
ಈ ಪ್ರಶಸ್ತಿಯನ್ನು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಮತ್ತು ವಸತಿ ಮತ್ತು ನಗರಾಭಿವೃದ್ಧಿ ಖಾತೆಯ ರಾಜ್ಯ ಸಚಿವ ತೋಕನ್ ಸಾಹು ಸೇರಿ ಕೆ ಎಸ್ ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್, ಐಐಟಿ ದೆಹಲಿಯ ರೈಸ್್ಡ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವಾಗಿದ್ದು, ಜರ್ಮನಿಯ GEZ ಸಂಸ್ಥೆಯ ಸಹಕಾರದೊಂದಿಗೆ ದೃಷ್ಟಿವಿಕಲ ಚೇತನ ಬಸ್ ಬಳಕೆದಾರರಿಗೆ ಬಸ್‌ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಸಹಾಯ ಮಾಡುತ್ತದೆ. 400 ಕ್ಕೂ ಹೆಚ್ಚು ದೃಷ್ಟಿ ವಿಕಲ ಚೇತನ ಬಳಕೆದಾರರಿಗೆ ಇದರ ಬಳಕೆಯ ಕುರಿತು ತರಬೇತಿ ನೀಡಲಾಗಿದೆ.
ಸರ್ಕಾರ, ಶಿಕ್ಷಣ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿದೆ ಜಾರಿಗೆ ತಂದಿರುವ ದೇಶದ ಮಾದರಿ ಉಪಕ್ರಮವಾಗಿದೆ ಎಂಬ ಹೆಗ್ಗಳಿಕೆ ಪಡೆದಿದೆ.
ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ ಸ್ನೇಹಿ ಹಲವು ಉಪಕ್ರಮಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಆಪರೇಷನ್ ಸಿಂಧೂರ್ ಸೋಲಿನ ಬಳಿಕ ಪಾಕಿಸ್ತಾನದಲ್ಲಿ ಸಂವಿಧಾನ ತಿದ್ದುಪಡಿ, ಅಸಿಮ್ ಮುನಿರ್ ಗೆ ಬಿಗ್ ರೋಲ್: ವರದಿ








