ಬೆಂಗಳೂರು : ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರ ಜಾರಿನಲ್ಲಿ ಕೈದಿಗಳ ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನೇಕ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದ್ದು ಈಗಾಗಲೇ ವರದಿ ಕೊಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಈ ಒಂದು ಪ್ರಕರಣ ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಬೆಂಗಳೂರಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಯಾರ್ಯಾರು ಸಂಬಂಧಪಟ್ಟ ಅಧಿಕಾರಿಗಳು ಇದ್ದಾರೋ ಯಾವ ಜೈಲಿನಲ್ಲಿ ಜೈಲಾಧಿಕಾರಿಗಳಿದ್ದರೊ ಅವರೇ ಇದಕ್ಕೆ ಹೊಣೆಗಾರರಾಗಿದ್ದಾರೆ. ಸರಿಯಾದ ರೀತಿ ಆಡಳಿತ ಮಾಡುವಂತದ್ದು ಜೈಲಾಧಿಕಾರಿಗಳ ಕರ್ತವ್ಯ. ಮೊಬೈಲ್ ಫೋನ್ ಗಾಂಜ ಮದ್ಯ ಹಗ್ ಬೇರೆ ಯಾವುದೇ ಚಟುವಟಿಕೆಗಳು ನಡೆಯುತ್ತವೆ ಅಂದಾಗ ಅದಕ್ಕೆ ಹೊಣೆ ಜೈಲಾಧಿಕಾರಿಗಳೇ ಹೊಣೆ.
ಇವತ್ತು ನಾನು ಪ್ರಮುಖವಾದ ಸಭೆ ಕರೆದಿದ್ದು ಸಭೆಯಲ್ಲಿ ಯಾವ ಪ್ರಮುಖ ಮಾಹಿತಿ ನೀಡುತ್ತಾರೋ ಅನೇಕ ಮಾಹಿತಿ ನಮಗೂ ಸಹ ಈಗಾಗಲೇ ಬಂದಿವೆ ಅದನ್ನೆಲ್ಲ ಪರಿಶೀಲನೆ ಮಾಡಿ ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತೇನೆ. ಸಿಎಂ ಸಿದ್ದರಾಮಯ್ಯ ಕೂಡ ಸೂಚನೆ ಕೊಟ್ಟಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧ ಪಟ್ಟವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಅಂತ ಸೂಚನೆ ನೀಡಿದ್ದಾರೆ. ಹಾಗಾಗಿ ಇಂದು ಸಭೆ ಕರೆದಿದ್ದೇನೆ ಸಭೆಯ ನಂತರ ಮತ್ತಷ್ಟು ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.








