ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ನಡೆದಿದ್ದು, ಶಿವಮೊಗ್ಗ ನಗರದ ಬ್ಯಾಂಕ್‌ವೊಂದರ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಮೇಲೆ ಅದೇ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು, ಮೈ ಸವರುವುದನ್ನು ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬ್ಯಾಂಕಿನ ವ್ಯವಹಾರ ಸಂಬಂಧ ಮೀಟಿಂಗ್ ಎಂದು ಶಿವಮೊಗ್ಗದ ಹೋಟೆಲ್ ಒಂದಕ್ಕೆ ಕರೆಯಿಸಿಕೊಂಡು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದೇ ರೀತಿ ಮೂರು ಬಾರಿ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.








