ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕೆಕೆಆರ್ಟಿಸಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ 15 ಜನರಿಗೆ ಗಂಭೀರವಾಗಿರುವ ಘಟನೆ ರಾಯಚೂರು ತಾಲೂಕಿನ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ರಾಯಚೂರು ತಾಲೂಕಿನ ಸಾತ್ ಮೈಲ್ ಕ್ರಾಸ್ ಬಳಿ, ಹೊಸಪೇಟೆಯಿಂದ ಹೈದರಾಬಾದ್ಗೆ ಕೆಕೆಆರ್ಟಿಸಿ ಸ್ಲೀಪರ್ ಕೋಚ್ ಬಸ್ ತಿರುಳುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದೆ ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








