ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಫೋಟೋಗಳು ವೈರಲ್ ಆಗಿವೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಆಪ್ತ ನಟ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜೈಲಿನ ವಿಡಿಯೋ ಹೊರಗಡೆ ಬಂದಿರುವ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ದರ್ಶನ್ ಆಪ್ತ ಧನ್ವೀರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ಒಂದು ಗಂಟೆಗೆ ಮನೆಯ ಬಳಿ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ದರ್ಶನ್ ಆಪ್ತ ಧನ್ವಿರ್ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.a








