ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತೀತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸ ಹಾಗೂ ಗೃಹಕಚೇರಿ ಕೃಷ್ಣಬಳಿ ಪೊಲೀಸರ ಬಿಗಿ ಭದ್ರತೆ ನಿಯೋಜನೆಗೊಳಿಸಲಾಗಿದ್ದು, ಒಂದು ಕೆ ಎಸ್ ಆರ್ ಪಿ ತುಕಡಿ ಸೇರಿದಂತೆ 80ಕ್ಕೂ ಹೆಚ್ಚು ಪೋಲಿಸರಿಂದ ಭದ್ರತೆ ಒದಗಿಸಲಾಗಿದೆ. ಕುಮಾರ ಕೃಪ ಗೆಸ್ಟ್ ಹೌಸ್ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಿದ್ದಾರೆ. ವಶಕ್ಕೆ ಪಡೆದು ಎರಡು ಬಿಎಂಟಿಸಿ ಬಸ್ಗಳಲ್ಲಿ ಸಾಗಿಸಲು ವ್ಯವಸ್ಥೆ ಸಹ ಮಾಡಲಾಗಿದೆ. ಸದ್ಯ ಶಿವಾನಂದ ಸರ್ಕಲ್ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.








