ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಿಜೆಪಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು.
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್ ಅಶೋಕ್ ಎಂಎಲ್ಸಿ ಸಿಟಿ ರವಿ ಎನ್ ರವಿಕುಮಾರ್ ಚಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಶಿವಾನಂದ್ ಸರ್ಕಲ್ ನಿಂದ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದುಕೊಂಡರು ಬಳಿಕ ಬಿಎಂಟಿಸಿ ಬಸ್ ನಲ್ಲಿ ಬಿಜೆಪಿ ನಾಯಕರನ್ನು ಕರೆದೊಯ್ದರು.








