ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷಾದಾರರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ.
ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ.









