ನವದೆಹಲಿ: ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡ ಪರಿಣಾಮ ಹಲವರು ಗಾಯಗೊಂಡು 9 ಮಂದಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ರಾಷ್ಟ್ರದ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.
ಸಾವನ್ನಪ್ಪಿದವರ ಮೃತ ದೇಹಗಳನ್ನು ಎಲ್ ಎನ್ ಜೆ ಪಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ದಳದವರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.







