ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಿದ್ದ ಎರಡು ಕಾರು ನಿಗೂಢವಾಗಿ ಸ್ಪೋಟಗೊಂಡ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ನಂ.1ರ ಬಳಿಯಲ್ಲಿ ನಿಲ್ಲಿಸಿದ್ದಂತ ಕಾರು ಸ್ಪೋಟಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇನ್ನು 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರು ಸ್ಪೋಟ ಘಟನೆಯಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದೆಹಲಿಯಲ್ಲಿ ಕಾರು ಸ್ಪೋಟ: ಉಗ್ರರ ಕೃತ್ಯ ಶಂಕೆ
ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1ರ ಬಳಿಯಲ್ಲಿ ಕಾರು ಸ್ಪೋಟಗೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಸ್ಪೋಟದ ಹಿಂದೆ ಉಗ್ರರ ಕೃತ್ಯದ ಶಂಕೆ ವ್ಯಕ್ತವಾಗಿದೆ.
ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡು 10 ಮಂದಿ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿದ್ದಾರೆ. ಈ ಕೃತ್ಯದ ಹಿಂದೆ ಉಗ್ರರ ಕೈವಾಡದ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ.
ಇನ್ನೂ ಕಾರು ಸ್ಪೋಟಕಕ್ಕೆ ಅಮೋನಿಯಂ ನೈಟ್ರೇಟ್ ಬಳಸಿ ಸ್ಪೋಟಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆಯನ್ನು ತೀವ್ರತರವಾಗಿ ನಡೆಸುತ್ತಿದ್ದಾರೆ.








