ಬೆಂಗಳೂರು : ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು…
— Siddaramaiah (@siddaramaiah) November 10, 2025








