ನವದೆಹಲಿ: ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಭೀಕರ ಕಾರು ಸ್ಫೋಟದಲ್ಲಿ ಎಂಟು ಜನರು ಸಾವನ್ನಪ್ಪಿ ಹಲವಾರು ಗಾಯಗೊಂಡ ಘಟನೆಯ ಬಗ್ಗೆ ರಾಜತಾಂತ್ರಿಕ ದೂತಾವಾಹಗಳು ಮತ್ತು ಭಾರತದಲ್ಲಿನ ವಿದೇಶಿ ರಾಯಭಾರಿಗಳು ತೀವ್ರ ದುಃಖ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿನ ಈಜಿಪ್ಟ್ ರಾಯಭಾರ ಕಚೇರಿ ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದೆ, “ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್ ನ ಜನರು ಮತ್ತು ಸರ್ಕಾರದ ಪರವಾಗಿ, ಕೆಂಪು ಕೋಟೆ ಸ್ಫೋಟದಿಂದ ಸಂತ್ರಸ್ತರಾದವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ನಮ್ಮ ಪ್ರಾಮಾಣಿಕ ಸಂತಾಪವನ್ನು ಸಲ್ಲಿಸುತ್ತೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖತಪ್ತರೊಂದಿಗೆ ಇವೆ ಮತ್ತು ಗಾಯಗೊಂಡವರೆಲ್ಲರೂ ಶೀಘ್ರ ಮತ್ತು ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ.” ಎಂದು ಹೇಳಿದ್ದಾರೆ.
ಭಾರತದಲ್ಲಿನ ಫ್ರಾನ್ಸ್ ರಾಯಭಾರಿ ಥಿಯೆರಿ ಮ್ಯಾಥೌ ಕೂಡ ಎಕ್ಸ್ ನಲ್ಲಿ ಸಂತಾಪ ಸೂಚಿಸಿ, “ಫ್ರೆಂಚ್ ಜನರು ಮತ್ತು ಸರ್ಕಾರದ ಪರವಾಗಿ, ಕೆಂಪು ಕೋಟೆ ಸ್ಫೋಟದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಸಂತ್ರಸ್ತರ ಕುಟುಂಬಗಳೊಂದಿಗೆ ನಮ್ಮ ಸಂವೇದನೆ ಇದೆ ಮತ್ತು ಗಾಯಗೊಂಡವರೆಲ್ಲರೂ ಪೂರ್ಣ ಮತ್ತು ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ.” ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಪಾನ್ ರಾಯಭಾರಿ ಒನೊ ಕೀಚಿ, “ದೆಹಲಿ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.








