ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ಬ್ಯೂರೋ ನಿರ್ದೇಶಕ ತಪನ್ ದೇಕಾ, ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಮತ್ತು ಎನ್ಐಎ ಡಿಜಿ ಸದಾನಂದ ವಸಂತ್ ಡೇಟ್ ಭಾಗವಹಿಸಲಿದ್ದಾರೆ.
ಇಲ್ಲಿನ ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.








