ನವದೆಹಲಿ : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಕಾರು ಸ್ಪೋಟದ ರೂವಾರಿಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸ್ಫೋಟದ ಹಿಂದೆ ಇರುವವರನ್ನು ಯಾವುದೇ ಕಾರಣಕ್ಕೂ ನಾವು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ದೆಹಲಿ ಸ್ಪೋಟದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್ ದೆಹಲಿ ದುರಂತದಲ್ಲಿ ನಿನ್ನೆ ಪ್ರಾಣ ಕಳೆದುಕೊಂಡು ವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ದೇಶದ ಜನರಿಗೆ ನಾನು ಭರವಸೆ ನೀಡುತ್ತೇನೆ ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿವೆ.
ತನಿಖೆಯ ಎಲ್ಲ ಮಾಹಿತಿಯನ್ನು ದುರಂತಕ್ಕೆ ಕಾರಣ ಆದವರನ್ನು ಕಟಕಟೆಗೆ ತಂದು ನಿಲ್ಲಿಸುತ್ತೇವೆ. ಅವರನ್ನು ಯಾವುದೇ ಸಂದರ್ಭ ಬಂದರೂ ಬಿಡುವುದಿಲ್ಲ.ಅವರಿಗೆ ತಕ್ಕ ಶಿಕ್ಷೆ ಕಾದಿದೆ ತಕ್ಕ ಶಾಸ್ತಿ ಮಾಡುತ್ತೇವೆ ಅವರನ್ನು ಕಟಕಟಗೆ ತಂದು ನಿಲ್ಲಿಸುತ್ತೇವೆ. ದೇಶದ ಜನರಿಗೆ ನಾನು ಭರವಸೆ ನೀಡುತ್ತೇನೆ ಎಂದು ದೆಹಲಿಯಲ್ಲಿ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ








