ಬೆಂಗಳೂರು : ಪಟಾಕಿ ಸ್ಫೋಟಕ್ಕೆ ಬಾಂಬ್ ಎಂದು ವಿದ್ಯಾರ್ಥಿಗಳು ಭಯಗೊಂಡ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿಗಳು ಪಟಾಕಿ ಇಟ್ಟಿದ್ದರು. ಬನ್ನೇರುಘಟ್ಟ ಬಳಿಯ ಎಸ್ ಬಿಂಗಿಪುರದ ಬಿ ಎಸ್ ಶಾಲೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ.
ನಿನ್ನೆ ಬೆಳಿಗ್ಗೆ ಶೌಚಾಲಯದಲ್ಲಿ ಕೆಲವು ವಿದ್ಯಾರ್ಥಿಗಳು ಪಟಾಕಿ ಇಟ್ಟಿದ್ದಾರೆ. ಪಟಾಕಿ ಬ್ಲಾಸ್ಟ್ ಶಬ್ದ ಕೇಳಿ ವಿದ್ಯಾರ್ಥಿಗಳು ಮತ್ತು ಸ್ಥಳೀಯ ನಿವಾಸಿಗಳು ಭಯಗೊಂಡಿದ್ದಾರೆ. ಶಾಲಾ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ಇದು ಪಟಾಕಿ ಎಂದು ಬೆಳಕಿಗೆ ಬಂದಿದೆ.ಸದ್ಯ ಪೊಲೀಸರು ಶಾಲಾ ಆಡಳಿತ ಮಂಡಳಿ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








