ಕಲಬುರ್ಗಿ : ಕಲಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೈಕ್ ಸವಾರರು ಸಾವನಪ್ಪಿರುವ ಘಟನೆ ಕಲಬುರ್ಗಿ ತಾಲೂಕಿನ ಫರತಾಬಾದ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಭಾಗಣ್ಣ ಆಡಿನ (31) ಮತ್ತು ಶರಣಬಸಪ್ಪ ಪೂಜಾರಿ (32) ಎಂದು ತಿಳಿದುಬಂದಿದೆ. ಜೇವರ್ಗಿ ತಾಲೂಕಿನ ಕಲ್ಲೂರು ಮತ್ತು ಕೊಳಕೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಜೇವರ್ಗಿ ಕಡೆಯಿಂದ ಕಲಬುರ್ಗಿ ಕಡೆಗೆ ಬರುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಕಲ್ಬುರ್ಗಿ ಸಂಚಾರ ಪೊಲೀಸ್ ಠಾಣೆ-1ರಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.








