ಬೆಂಗಳೂರು: ತಿಪಟೂರು ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್ಪ್ರೆಸ್ ಮತ್ತು 12089/12090 ಕೆಎಸ್ಆರ್ ಬೆಂಗಳೂರು – ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್ಪ್ರೆಸ್ಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ಮುಂದುವರಿಸಲಾಗಿದೆ. ಈ ವಿಸ್ತರಣೆಯು ನವೆಂಬರ್ 16, 2025 ರಿಂದ ಮೇ 15, 2026 ರವರೆಗೆ ಜಾರಿಯಲ್ಲಿರಲಿದೆ. ಈ ನಿಲುಗಡೆಯು ಪ್ರಸ್ತುತ ಇರುವ ವೇಳಾಪಟ್ಟಿಯಂತೆಯೇ ಮುಂದುವರಿಯಲಿದೆ.








