ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಲ ದಿನಗಳ ಹಿಂದಷ್ಟೇ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸುವುದನ್ನು ನಿಷೇಧಿಸಿ ಆದೇಶಿಸಿದ್ದರು. ಆದರೇ ರಾಜ್ಯ ಸರ್ಕಾರದ ಈ ಆದೇಶಕ್ಕೂ ಡೋಂಟ್ ಕೇರ್ ಎನ್ನುವಂತೆ ಇಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಸಲಾಗಿದೆ.

ದಿನಾಂಕ 28-10-2025ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿ, ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚಿಸಿದ್ದರು. ಈ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚಿಸಿದ್ದರು.
ಆದರೇ ಇಂದು ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಚೇರಿಯಲ್ಲಿ ನಡೆದಂತ ಗೃಹಲಕ್ಷ್ಮೀ ಸಂಘದ ಪ್ರಮಾಣಪತ್ರ ಹಸ್ತಾಂತರದ ಸಭೆಯಲ್ಲೇ ಸರ್ಕಾರಿ ಆದೇಶವನ್ನು ಗಾಳಿಗೆ ತೂರಲಾಗಿದೆ. ಇಂದಿನ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ಮಾಡಿರುವುದು, ಬಿಡುಗಡೆಯಾದಂತ ಪೋಟೋಗಳಿಂದ ಖಚಿತವಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕಿದ್ದಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಚೇರಿಯ ಸಿಬ್ಬಂದಿಯೇ ಡೋಂಟ್ ಕೇರ್ ಎನ್ನುವಂತೆ ಪಾಲಿಸದೇ ಇರುವುದು ಪೋಟೋಗಳಿಂದ ಬಹಿರಂಗವಾಗಿದೆ. ಪರಿಸರ ಸ್ನೇಹಿಯಾಗಿ ತಯಾರಿಸಿದಂತ ಪರಿಕರಗಳನ್ನು ಬಳಕೆ ಮಾಡಬೇಕಿದ್ದವರೇ, ಈಗ ಆದೇಶ ಉಲ್ಲಂಘಿಸಿರುವುದು ಸಾರ್ವಜನಿಕರಲ್ಲಿ ಸರ್ಕಾರಿ ಆದೇಶಕ್ಕೆ ಕಿಮ್ಮತ್ ಇಲ್ವ ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ
ರಾಜ್ಯದಲ್ಲಿ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡ `ರೈತರ’ ಖಾತೆಗೆ ಹಣ ವರ್ಗಾವಣೆ : CM ಸಿದ್ದರಾಮಯ್ಯ ಘೋಷಣೆ








