ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಅಹಿಂದ ಶಕ್ತಿ ಪ್ರದರ್ಶನ ನಡೆಯುತ್ತಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಹಾವನೂರು ವರದಿಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಈ ಕುರಿತು ಮಾಹಿತಿ ನೀಡಿದರು.
ಎಲ್ ಜಿ ಹಾವನೂರು ವರದಿಗೆ 50 ವರ್ಷ ತುಂಬಿದೆ ಸುವರ್ಣ ಮಹೋತ್ಸವದ ಅಂಗವಾಗಿ ನವೆಂಬರ್ 19ರಂದು ಸಮಾವೇಶ ಹಮ್ಮಿಕೊಂಡಿದ್ದು ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಮಾವೇಶ ಆಯೋಜನೆ ಮಾಡಲಾಗಿದೆ. ನವೆಂಬರ್ 19 ರ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಹಿಂದೆ ವರ್ಗದ ಸಚಿವರು ಶಾಸಕರು ಮುಖಂಡರು ಭಾಗಿಯಾಗಲಿದ್ದಾರೆ.
ಮರು ಸಮೀಕ್ಷೆಗೆ ವಿರೋಧ ಮಾಡಿದರೆ ದಂಗೆ ಹೇಳುತ್ತೇವೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ. ಕಾಂಗ್ರೆಸ್ ನಿರ್ನಾಮ ಆಗಲಿದೆಯಿಂದ ಬೆಂಬಲ ಇರುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸುಲಭವಲ್ಲ. ಕಾಂಗ್ರೆಸ್ ಹೈಕಮಾಂಡ್ಗೆ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಎಚ್ಚರಿಕೆ ನೀಡಿದರು.








