ಬೆಂಗಳೂರು: ಗಿರೀಶ್ ಮಟ್ಟಣ್ಣನವರ್ ಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಮಹತ್ವದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಮತ್ತು ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸಲ್ಲಿಸಿರುವ ದೂರು ಸಲ್ಲಿಸಲಾಗಿತ್ತು. ಬೆಂಗಳೂರಿನ ರಾಜಾಜಿನಗರದ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬುವರು ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆ ನಡೆಸಲಾಗಿದ್ದು, 3 ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅರ್ಜಿದಾರರು ಸಲ್ಲಿಸಿರುವ ದೂರು ಆಧರಿಸಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ನಿರ್ದೇಶನ ನೀಡಿದೆ.








