ಬಾಳೆಹೊನ್ನೂರು: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು,ಮದ್ಯ ಸೇವಿಸಿದಕ್ಕೆ ಅಪ್ಪ ಬಯ್ತಾರೆಂದು 13 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬಾಳೆಹೊನ್ನೂರು ಸಮೀಪದ ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ಪಾಲ್ ಬಳಿಯ ಗಂಗೋಜಿ ಎಂಬಲ್ಲಿ 13 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ಊರಿನಲ್ಲಿ ನಡೆದ ಮದುವೆಗೆ ತೆರಳಿದ್ದು, ಅಲ್ಲಿ ಮದ್ಯ ಸೇವಿಸಿದ್ದ. ವಿಷಯ ಮನೆಯಲ್ಲಿ ಗೊತ್ತಾದರೆ ಎಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಾಲಕನ ತಂದೆ ಜಯರಾಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಕುರಿತು ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ರವೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.








