ಕೊಪ್ಪಳ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ತರಗತಿಯಲ್ಲಿ ಪಾಠ ಮಾಡುವಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಮಹಿಬೂಬಸಾಬ ಕಸಾಬ (59) ಬುಧವಾರ ತರಗತಿಯಲ್ಲಿ ಪಾಠ ಮಾಡುತ್ತಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಪಾಠ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿ, ನೆಲಕ್ಕೆ ಕುಸಿದುಬಿದ್ದಿದ್ದಾರೆ. ತಕ್ಷಣ ಇತರ ಶಿಕ್ಷಕರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.








