ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ತಮ್ಮ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಸುಗಮವಾಗಿ ಜನರಿಗೆ ಸ್ಪಂದಿಸುವ ಉದ್ದೇಶದಿಂದ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರಂಭಿಸಿರುವ ಗ್ರಾಮ-ಫೋನ್ ಉಚಿತ ಸಹಾಯವಾಣಿಗೆ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬುಧವಾರ ನಗರದ ಜಿ.ಪಂ. ಸಭಾಂಗಣದಲ್ಲಿ ಚಾಲನೆ ನೀಡಿದರು.
ಸಹಾಯವಾಣಿ ಸಂಖ್ಯೆ 1800-425-1978 ಉಚಿತ ಸೇವೆ ನ.20 ರಿಂದ ಕಾರ್ಯಾರಂಭ ಮಾಡಲಿದೆ. ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಲ್ಲಿ ಒಟ್ಟು 189 ಗ್ರಾಮ ಪಂಚಾಯಿತಿಗಳಿವೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಂದಾಜು ಒಟ್ಟು 15,04,073 ಜನರು ವಾಸವಾಗಿದ್ದಾರೆ. ಗ್ರಾಮ ಪಂಚಾಯಿತಿಗಳ ಮುಖಾಂತರ ಗ್ರಾಮೀಣ ಜನರ ಜೀವನ ಮಟ್ಟವನ್ನು ಉತ್ತಮಪಡಿಸುವ ಅನೇಕ ಜೀವನೋಪಾಯ ಹಾಗೂ ಬಡತನ ನಿರ್ಮೂಲನ ಕಾರ್ಯಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅನುμÁ್ಠನಗೊಳಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಆಡಳಿತವನ್ನು ಜನಪರ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ವತಿಯಿಂದ ಉಚಿತ ಸಹಾಯವಾಣಿ ಸಂಖ್ಯೆ 1800-425-1978 ನ. 20 ರಿಂದ ಕಾರ್ಯಾರಂಭ ಮಾಡಲಿದೆ.
ಗ್ರಾಮೀಣ ಭಾಗದ ಜನರು “ಗ್ರಾಮ ಫೋನ್” ಉಚಿತ ಸಹಾಯವಾಣಿಗೆ ಕರೆ ಮಾಡಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕುಂದು ಕೊರತೆಗಳನ್ನು ದಾಖಲಿಸಬಹುದಾಗಿದೆ. ಈ ದೂರುಗಳನ್ನು ಜಿಲ್ಲಾ ಪಂಚಾಯತ್ ಹಂತದ ಪ್ರತಿನಿಧಿ ಸ್ವೀಕರಿಸಿ, ದೂರಿನ ವಿಷಯವನ್ನು ಆಧರಿಸಿ ಸಂಬಂಧಿಸಿದ ಅಧಿಕಾರಿ ಅಥವಾ ಪ್ರತಿನಿಧಿಗೆ ಕರೆಯ ವಿವರವನ್ನು ಕುಂದು ಕೊರತೆ ನಿವಾರಿಸಲು ವರ್ಗಾಯಿಸಲಿದ್ದಾರೆ. ದೂರು ಸ್ವೀಕೃತಿಯಾಗಿರುವ ಬಗ್ಗೆ ನಾಗರೀಕರ ಮೊಬೈಲ್ ಸಂಖ್ಯೆಗೆ ಸಂದೇಶ ರವಾನೆಯಾಗಲಿದೆ. ಮುಂದಿನ ದಿನಗಳಲ್ಲಿ ವಾಟ್ಸಾಪ್ ಮೂಲಕ ಸಂದೇಶ ರವಾನಿಸಲು ಅಭಿವೃದ್ಧಿಪಡಿಸಲಾಗುವುದು. ದೂರು ಪರಿಹರಿಸುವ ಸೌಲಭ್ಯವನ್ನು ಗ್ರಾಮೀಣ ಜನತೆಗೆ ಕಲ್ಪಿಸುವ ನಿಟ್ಟಿನಲ್ಲಿ ‘ಗ್ರಾಮ-ಫೆÇೀನ್’ ಚಿತ್ರದುರ್ಗ ಜಿಲ್ಲಾ ಪಂಚಾಯತ್‍ಯ ಪ್ರಥಮ ಹೆಜ್ಜೆಯಾಗಿದೆ ಎಂದು ಜಿ.ಪಂ. ಸಿಇಓ ಡಾ.ಆಕಾಶ್ ಈ ಸಂದರ್ಭದಲ್ಲಿ ತಿಳಿಸಿದರು.








