ತುಮಕೂರು : ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ ವಾಷ್ ಆಗಬಹುದು ಎಂದು ಕಾಂಗ್ರೆಸ್ ಶಾಸಕ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿಯ ಜನ ಸಂಪರ್ಕ ಸಭೆಯಲ್ಲಿ ಕೆ ಎನ್ ರಾಜಣ್ಣ ಈ ಒಂದು ಹೇಳಿಕೆ ನೀಡಿದ್ದಾರೆ.
2004ರಲ್ಲಿ ನಾನು ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕನಾಗಿದ್ದೆ ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್, ವಾಷ್ ಆಗಿತ್ತು. ಈಗ ಜಿಲ್ಲೆಯಲ್ಲಿ ಮತ್ತೆ ಅದೇ ಸ್ಥಿತಿ ಬರುತ್ತೇನೋ ಗೊತ್ತಿಲ್ಲ. ರಾಜಕಾರಣದಲ್ಲಿ ಯಾರು ಶಾಶ್ವತ ಮಿತ್ರರು ಅಲ್ಲ ಶತ್ರುಗಳು ಇರಲ್ಲ ಎಂದು ಶಾಸಕ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.
2004ರಲ್ಲಿ ಕಾಂಗ್ರೆಸ್ ಪಕ್ಷದ ನನಗೆ ಸರಿಯಾದ ಗೌರವ ನೀಡಲಿಲ್ಲ. ಆಗ ನಾನು ಜೆಡಿಎಸ್ ಪಕ್ಷ ಸೇರಿಕೊಂಡು ಜಿಲ್ಲೆಯಲ್ಲಿ ಪ್ರವಾಸ ಮಾಡಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ವೈಟ್ ವಾಶ್ ಮಾಡಿದ್ವಿ. ಕಾಂಗ್ರೆಸ್ ಗೆ ಮತ್ತೆ ಅಂತಹ ಸ್ಥಿತಿ ಬರುತ್ತೇನೋ ಗೊತ್ತಿಲ್ಲ ನೋಡೋಣ ಮುಂದೆ ಏನಾಗುತ್ತೋ ಅಂತ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.








