ತುಮಕೂರು : ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿಬಿಳಿಸಿದ್ದು,ಈ ಒಂದು ಪ್ರಕರಣದ ಬಳಿಕ ರಾಜ್ಯಕ್ಕೂ ರಾಷ್ಟ್ರ ರಾಜಧಾನಿ ದೆಹಲಿಗೂ ನಂಟು ಇದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ತುಮಕೂರಿನಲ್ಲಿ ಶಂಕಿತ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದು ಉಚ್ಚಾರಣೆ ಮಾಡಿ ಕಳುಹಿಸಿರುವ ಘಟನೆ ವರದಿಯಾಗಿದೆ.
ಹೌದು ದೆಹಲಿ ಸ್ಫೋಟದ ಬಳಕೆ ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ. ಉಗ್ರ ಸಂಘಟನೆ ಜೊತೆಗೆ ಈ ಹಿಂದೆ ಈ ವ್ಯಕ್ತಿ ಉಗ್ರ ಸಂಘಟನೆಯ ಸಂಪರ್ಕದಲ್ಲಿ ಇದ್ದ ಎನ್ನಲಾಗುತ್ತಿದ್ದು ಆ ಕಾರಣ ಹಿನ್ನೆಲೆ ತುಮಕೂರಿನ ಪಿ ಎಚ್ ಕಾಲೋನಿ ನಿವಾಸಿಯ ವಿಚಾರಣೆ ನಡೆಸಲಾಗುತ್ತಿದೆ.ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿಚಾರಣೆ ನಡೆಯುತ್ತಿದೆ ASI ಪುರುಷೋತ್ತಮ್ ವ್ಯಕ್ತಿಯ ವಿಚಾರಣೆ ನಡೆಸಿದ್ದರೆ. ಸುಮಾರು 2 ಗಂಟೆ ವಿಚಾರಣೆ ನಡೆಸಿ ನಂತರ ವ್ಯಕ್ತಿಯನ್ನು ಬಿಟ್ಟು ಕಳಿಸಿದ್ದಾರೆ ಎಂದು ತಿಳಿದು ಬಂದಿದೆ.








