ಬೆಂಗಳೂರು : ಇತ್ತೀಚಿಗೆ AI ತಂತ್ರಜ್ಞಾನ ಬಳಸಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಲ್ಲದೇ ಹುಲಿ ಮನುಷರ ಮೇಲೆ ಅಟ್ಯಾಕ್ ಮಾಡುವ ವಿಡಿಯೋ ಸಹ ಹರಿದಾಡಿತ್ತು.
ಇದೀಗ AI ತಂತ್ರಜ್ಞಾನ ಬಳಸಿ ಹುಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಬಿಟ್ಟರೆ, ಫೋಟೋ, ವಿಡಿಯೋ ಶೇರ್ ಮಾಡಿದ್ರೆ ಕಠಿಣ ಕ್ರಮ ಕೈಗೊಳಲಾಗುತ್ತೆ. ಹುಲಿ ಬಂತು ಎಂದು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಹುಲಿ ಬಂತು ಎಂದು ಸುಳ್ಳು ಫೋಟೋ ಹಂಚುವುದರಿಂದ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ. AI ಹಾವಳಿಯಿಂದ ಕೆಲಸ ನಿರ್ವಹಿಸಲು ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.








