ಬೆಂಗಳೂರು : ಜಿಬಿಎ ವ್ಯಾಪ್ತಿಯ ಕಸ ಗುಡಿಸುವ ಯಂತ್ರಕ್ಕೆ ನೂರಾರು ಕೋಟಿ ಬಾಡಿಗೆ ಏಳು ವರ್ಷದ ಅವಧಿಗೆ 46 ಕಸ ಗುಡಿಸುವ ಯಂತ್ರ ಬಾಡಿಗೆ ಪಡೆಯಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಎಚ್ ಕೆ ಪಾಟೀಲ್ ಹೇಳಿಕೆ ನೀಡಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರಗಳು ಈ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಕಸಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲಾಗಿದೆ 613.25 ಕೋಟಿ ಮೊತ್ತದಲ್ಲಿ ಬಾಡಿಗೆ ಪಡೆಯಲು ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ಇನ್ನು ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ ಮುಂದಿನ ಹೆಜ್ಜೆ ಇಡುವುದಕ್ಕಾಗಿ ತೋರಿಸಿದಂತಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪುಟ ಅಭಿನಂದನೆ ಸಲ್ಲಿಸಿತು ಎಂದು ಸಚಿವ ಪಾಟೀಲ್ ತಿಳಿಸಿದರು.
3 ನಮ್ ಪುಟ್ಟ ಉಪ ಸಮಿತಿಗಳು ಆರು ತಿಂಗಳು ಆದರೂ ವರದಿ ಸಲ್ಲಿಸಲಿಲ್ಲ ಆದಷ್ಟು ಬೇಗ ವರದಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ವರದಿಯ ಪರಿಶೀಲನಾ ಉಪಸಮಿತಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ, ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗಳ ಪರಿಶೀಲನೆಗೆ ನೇಮಿಸಿರುವ ಉಪಸಮಿತಿ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆ ಆಗಿರುವ ಉಪಸಮಿತಿ, ನೈಸ್ ಕಾರಿಡಾರ್ ಯೋಜನೆಯ ಅನುಷ್ಠಾನ ಮುಂದಿನ ಯೋಜನೆ ಪ್ರಗತಿ ಈ ಸಂಬಂಧ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ರಚಿಸಿರುವ ಉಪಸಮಿತಿಗಳ ವರದಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.








