ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಕೇವಲ ಹಾರ್ನ್ ಮಾಡಿದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸದಾಶಿವನಗರ್ ಪೊಲೀಸ್ ಹಣ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್ವೇರ್ ಇಂಜಿನಿಯರ್ ನಿಂದ ಕೊಲೆಗೆ ಯತ್ನಿಸಿರುವ ಘಟನೆ ವರದಿಯಾಗಿದ್ದು ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡು ಬೈಕಿಗೆ ಕಾರು ಡಿಕ್ಕಿ ಹೊಡೆದಿದ್ದಾನೆ. ಸಾಫ್ಟ್ವೇರ್ ಇಂಜಿನಿಯರ್ ಸುಕೃತ್ ಕೇಶವನಿಂದ ಈ ಒಂದು ಕೃತ್ಯ ನಡೆದಿದೆ. ಸುಕೃತ್ ಬೈಕಿಗೆ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಕ್ಟೋಬರ್ 26ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.








