ಮುಧೋಳ: ಕಬ್ಬಿನ ಬಾಕಿ ಬಿಲ್ ಪಾವತಿಗೆ ರೈತರ ಪ್ರತಿಭಟನೆ ಕಿಚ್ಚು ಸ್ಪೋಟಗೊಂಡಿದೆ. ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಲಾಗಿದೆ.
ಮುಧೋಳದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಿಗೆ ರೈತರು ಬೆಂಕಿ ಇಟ್ಟು ಆಕ್ರೋಶವನ್ನು ಹೊರ ಹಾಕಿದ್ದಾರೆ. ಮುಧೋಳದ ಸೈದಾಪುರ ಗೋದಾವರಿ ಸಕ್ಕರೆ ಕಾರ್ಖಾನೆಯ ಮುಂದೆ ಈ ಘಟನೆ ನಡೆದಿದೆ.








