ಬೆಂಗಳೂರು: ರಾಜ್ಯದ ಜಲಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳ ಕುರಿತು ಬೆಳಕು ಚೆಲ್ಲಲು ಡಿಸಿಎಂ ಡಿ.ಕೆ. ಶಿವಕುಮಾರ್ ರಚಿಸಿರುವ ‘ನೀರಿನ ಹೆಜ್ಜೆ’ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ಇಂದು ಬಿಡುಗಡೆ ಮಾಡಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಎನ್.ಎಸ್.ಬೋಸರಾಜು, ಸುಪ್ರೀಂಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಜ್ಯದ ಜಲಸಂಪನ್ಮೂಲ, ಇತಿಹಾಸ, ಸವಾಲುಗಳು ಮತ್ತು ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳ ಕುರಿತಾಗಿ ಉಪ ಮುಖ್ಯಮಂತ್ರಿಗಳಾದ @DKShivakumar ಅವರು ರಚಿಸಿರುವ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ @siddaramaiah ಅವರು ಬಿಡುಗಡೆಗೊಳಿಸಲಿದ್ದಾರೆ. #NeerinaHejje pic.twitter.com/1rD5pH08ct
— DIPR Karnataka (@KarnatakaVarthe) November 13, 2025








