Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

12/03/2026 4:50 AM

ಕೆಎಸ್‌ಆರ್‌ಟಿಸಿಯ ‘ಧ್ವನಿಸ್ಪಂದನ’ಕ್ಕೆ ರಾಷ್ಟ್ರೀಯ ಗೌರವ: ನವದೆಹಲಿಯಲ್ಲಿ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

12/03/2026 12:23 AM

ಭಾರತೀಯರ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ, ಆದ್ರೆ ಕಾಂಗ್ರೆಸ್ ಯುದ್ಧವನ್ನ ರಾಜಕೀಯಗೊಳಿಸ್ತಿದೆ : ಪ್ರಧಾನಿ ಮೋದಿ

11/03/2026 10:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `ಮಾನವ-ವನ್ಯಪ್ರಾಣಿ ಸಂಘರ್ಷ’ ತಪ್ಪಿಸಲು ಡ್ರೋನ್ ಕ್ಯಾಮರಾಗಳ ಬಳಕೆ : CM ಸಿದ್ದರಾಮಯ್ಯ
KARNATAKA

ರಾಜ್ಯದಲ್ಲಿ `ಮಾನವ-ವನ್ಯಪ್ರಾಣಿ ಸಂಘರ್ಷ’ ತಪ್ಪಿಸಲು ಡ್ರೋನ್ ಕ್ಯಾಮರಾಗಳ ಬಳಕೆ : CM ಸಿದ್ದರಾಮಯ್ಯ

By kannadanewsnow5714/11/2025 7:52 AM

ಬೆಂಗಳೂರು : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋನ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ. ಇದಕ್ಕಾಗಿ ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸುವುದು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಗಳು.

ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ಡ್ರೋನ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಬೇಕು.

ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸಬೇಕು.

ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತು ಯಾವ ಸ್ವರೂಪದ ಸಂಘರ್ಷ ಇದೆ ಎಂದು ಪಟ್ಟಿ ಮಾಡಬೇಕು.

ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ ಮಾಡಬೇಕು.

ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ ಮಾಡತಕ್ಕದ್ದು.

ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಹೂಡಬೇಕು.

ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ, ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳಬೇಕು.

ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24/7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು.

ವನ್ಯಜೀವಿ ಸೆರೆ , ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸಬೇಕು.

ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ ಮಾಡುವುದು. ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯಬೇಕು.

ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸತಕ್ಕದ್ದು.

ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6,395 ಇದ್ದು, ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಹುಲಿ ಸಂಖ್ಯೆ 563 ಇದ್ದು, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಹಾಗೂ 1,879 ಚಿರತೆಗಳಿದ್ದು, ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.

ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು. ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು.

ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ
ಲಾಂಟಾನ ಕಳೆಯ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳಿಗೆ ಮೇವಿಗೆ ಕೊರತೆ ಉಂಟಾಗುತ್ತದೆ.

ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸುವುದು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯಲ್ಲಿ ನಾನು ನೀಡಿದ ಸೂಚನೆಗಳು ;

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋನ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ… pic.twitter.com/oif9SEGJvw

— Siddaramaiah (@siddaramaiah) November 13, 2025

Use of drone cameras to prevent 'human-wildlife conflict' in the state: CM Siddaramaiah
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

12/03/2026 4:50 AM1 Min Read

ಕೆಎಸ್‌ಆರ್‌ಟಿಸಿಯ ‘ಧ್ವನಿಸ್ಪಂದನ’ಕ್ಕೆ ರಾಷ್ಟ್ರೀಯ ಗೌರವ: ನವದೆಹಲಿಯಲ್ಲಿ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

12/03/2026 12:23 AM1 Min Read

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 8:40 PM1 Min Read
Recent News

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

12/03/2026 4:50 AM

ಕೆಎಸ್‌ಆರ್‌ಟಿಸಿಯ ‘ಧ್ವನಿಸ್ಪಂದನ’ಕ್ಕೆ ರಾಷ್ಟ್ರೀಯ ಗೌರವ: ನವದೆಹಲಿಯಲ್ಲಿ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

12/03/2026 12:23 AM

ಭಾರತೀಯರ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ, ಆದ್ರೆ ಕಾಂಗ್ರೆಸ್ ಯುದ್ಧವನ್ನ ರಾಜಕೀಯಗೊಳಿಸ್ತಿದೆ : ಪ್ರಧಾನಿ ಮೋದಿ

11/03/2026 10:12 PM

ಹಾರ್ಮುಜ್ ಜಲಸಂಧಿಯಲ್ಲಿ ಕಾಂಡ್ಲಾಗೆ ತೆರಳುತ್ತಿದ್ದ ಹಡಗಿನ ಮೇಲಿನ ದಾಳಿಗೆ ಭಾರತ ಖಂಡನೆ

11/03/2026 9:53 PM
State News
KARNATAKA

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

By kannadanewsnow5712/03/2026 4:50 AM KARNATAKA 1 Min Read

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇಲಾಖೆಯ ಎಲ್ಲಾ…

ಕೆಎಸ್‌ಆರ್‌ಟಿಸಿಯ ‘ಧ್ವನಿಸ್ಪಂದನ’ಕ್ಕೆ ರಾಷ್ಟ್ರೀಯ ಗೌರವ: ನವದೆಹಲಿಯಲ್ಲಿ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

12/03/2026 12:23 AM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 8:40 PM

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.