ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು. ಸಾಮಾಜಿಕ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಸ್ಪಷ್ಟನೆ ಬಿಡುಗಡೆ ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವ್ಯಾಟ್ಸಪ್ ಗ್ರೂಪ್ಗಳಲ್ಲಿ ಸರ್ಕಾರದ ಅಧಿಸೂಚನೆ ದಿನಾಂಕ: 14.11.2025 ರಂದು ” ಸಾಲುಮರದ ತಿಮ್ಮಕ್ಕರವರು ” ನಿಧನರಾದ ಹಿನ್ನೆಲೆಯಲ್ಲಿ ಇವರ ಅಂತ್ಯಕ್ರಿಯೆಯನ್ನು ಹುಟ್ಟು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಎಂದು ತಿಳಿಸಿರುವ ಅಧಿಸೂಚನೆಯೂ ನೈಜ್ಯತೆಯಿಂದ ಕೂಡಿರುವುದಿಲ್ಲ ಹಾಗೂ ಇದು ನಕಲಿ ಆಗಿರುತ್ತದೆ ಎಂಬುದಾಗಿ ಹೇಳಿದೆ.
ಸದರಿ ನಕಲಿ ಅಧಿಸೂಚನೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಎಂದು ಘೋಷಿಸಿರುವುದು ಕೂಡ ನಕಲಿ ಆಗಿರುತ್ತದೆ ನೈಜತೆಯಿಂದ ಕೂಡಿರುವುದಿಲ್ಲವೆಂದು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯು ಸ್ಪಷ್ಟ ಪಡಿಸಿದೆ.








