ಬೆಂಗಳೂರು : ರಾಜ್ಯದ ಪಿಯುಸಿ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆ ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಮಟ್ಟದ ಮಕ್ಕಳ ದಿನಾಚರಣೆ, ಪೋಷಕರ-ಶಿಕ್ಷಕರ ಮಹಾ ಸಭೆ ಯಲ್ಲಿ ಮಾತನಾಡಿದ ಸಚಿವರು, ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪಿಯು ವಿದ್ಯಾರ್ಥಿಗಳಿಗೆ ಬಿಸಿಯೂಟದ ಕುರಿತು ನಿರ್ಧರಿಸಲಾಗಿದೆ ಎಂದರು.
2026-27ರ ಬಜೆಟ್ನಲ್ಲಿ ಘೋಷಿಸಲಾಗುವುದು. ಅದರೊಂದಿಗೆ ಉಳಿದ ಸರ್ಕಾರಿ ಮತ್ತು ಅನುದಾನಿತ ಪಿಯು ಕಾಲೇಜುಗಳಿಗೆ ಬಿಸಿಯೂಟ ವಿಸ್ತರಣೆ ಬಗ್ಗೆಯೂ ಚಿಂತನೆಯಿದ್ದು, ಸಿಎಂ ಜೊತೆಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.








