ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ನಡೆದ ಸ್ಫೋಟದ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮಹಾನಿರ್ದೇಶಕ ನಳಿನ್ ಪ್ರಭಾತ್ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಘಟನೆಯಲ್ಲಿನ ಭಯೋತ್ಪಾದಕ ಕೋನವನ್ನು ತಳ್ಳಿಹಾಕಿದ್ದಾರೆ ಮತ್ತು ಇದು “ಆಕಸ್ಮಿಕ ಸ್ಫೋಟ” ಎಂದು ಕರೆದಿದ್ದಾರೆ.
ಊಹಾಪೋಹಗಳಿಂದ ದೂರವಿರುವಂತೆ ಅವರು ಜನರನ್ನು ಒತ್ತಾಯಿಸಿದರು ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದರು








