ಬೆಂಗಳೂರು : ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ನಟಿ ಒಬ್ಬರಿಗೆ ಉದ್ಯಮಿ ವೆಂಕಟೇಶ ರೆಡ್ಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಅರವಿಂದ್ ವೆಂಕಟೇಶ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಲಾಕ್ ಆಗಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಅರೆಸ್ಟ್ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ನಡಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈತ AVR ಗ್ರೂಪ್ ಸಂಸ್ಥಾಪಕನಾಗಿದ್ದು ಅಲ್ಲದೆ ಚಲನಚಿತ್ರ ನಿರ್ಮಾಪಕ ಕೂಡ ಆಗಿದ್ದಾನೆ ನಟಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಸದ್ಯ ಪೋಲಿಸಲು ಉದ್ಯಮಿಯನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. 2021ರಲ್ಲಿ ಅರವಿಂದ್ಗೂ ಈ ನಟಿಗೂ ಪರಿಚಯ ಬೆಳೆದಿತ್ತು. 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್ ಕ್ರಿಕೆಟ್ ಕಪ್’ ಉದ್ಘಾಟನೆಗೆ ಬರುವಂತೆ ಅರವಿಂದ್ ನಟಿ ಬಳಿ ಕೇಳಿದ್ದ. ಅಂತೆಯೇ ನಟಿ ತೆರಳಿದ್ದರು. ಅಲ್ಲಿಂದ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಅಲ್ಲಿಂದ ಪ್ರೀತಿ-ಕಾಳಜಿಯಿಂದ ಅರವಿಂದ್ ನಡೆದುಕೊಳ್ಳುತ್ತಿದ್ದನಂತೆ. ಆ ಬಳಿಕ 2022ರ ಆಗಸ್ಟ್ನಲ್ಲಿ ಅರವಿಂದ್ ನಟಿಯ ಜೊತೆ ಸಂಪರ್ಕ ಕಳೆದುಕೊಂಡ. ಇದಕ್ಕೆ ಕಾರಣ ನಟಿಗೆ ತಿಳಿದಿರಲಿಲ್ಲ.
ನಂತರ ಅರವಿಂದ್ ಮತ್ತೆ ನಟಿಯ ಜೊತೆ ಸಂಪರ್ಕ ಬೆಳೆಸಿದ್ದೂ ಅಲ್ಲದೆ, ನಟಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಮಾನಸಿಕ ಸ್ಥಿತಿ ಹಾಗೂ ಕುಡಿತದ ಚಟದ ಬಗ್ಗೆ ನಟಿಗೆ ಆಗ ಗೊತ್ತಾಯಿತು. 2024ರಲ್ಲಿ ಒಮ್ಮೆ ಅರವಿಂದ್ ನಟಿಗೆ ಕರೆ ಮಾಡಿದ್ದೂ ಅಲ್ಲದೆ, ನಿನ್ನನ್ನು ಮದುವೆ ಆಗುತ್ತೇನೆ ಎಂದು ಹೇಳಿದ್ದ. ಇದರಿಂದ ಭಯಗೊಂಡ ನಟಿ ನೂರು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರಂತೆ. ಈ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.








