ನವದೆಹಲಿ : ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕಿಸಾನ್ ಸಮ್ಮಾನ್ (ಪಿಎಂ ಕಿಸಾನ್) ಯೋಜನೆಯ 21ನೇ ಕಂತಿನ ಭಾಗವಾಗಿ ಅರ್ಹ ರೈತರ ಖಾತೆಗೆ ತಲಾ 2,000 ರೂ. ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.19ರಂದು ಬಿಡುಗಡೆ ಮಾಡಲಿದ್ದಾರೆ.
2019ರಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಬಾರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಇದುವರೆಗೂ ಒಟ್ಟು 20 ಕಂತುಗಳಲ್ಲಿ 11 ಕೋಟಿ ರೈತ ಕುಟುಂಬಗಳಿಗೆ 3.70 ಲಕ್ಷ ಕೋಟಿ ರೂ. ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಇಲಾಖೆ ಹೇಳಿದೆ.
PM ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ, ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕವಾಗಿ ₹6,000 ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಕೇಂದ್ರ ಸರ್ಕಾರದ ಯೋಜನೆಯನ್ನು ಫೆಬ್ರವರಿ 24, 2019 ರಂದು ಪ್ರಾರಂಭಿಸಲಾಯಿತು. ಯೋಜನೆಯ ಮಹತ್ವವನ್ನು ಪರಿಗಣಿಸಿ, PM ಕಿಸಾನ್ ಪೋರ್ಟಲ್ ಮತ್ತು CPGRAMS (ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ಮೇಲ್ವಿಚಾರಣಾ ವ್ಯವಸ್ಥೆ) ದೂರುಗಳನ್ನು ನೋಂದಾಯಿಸಲು ಮತ್ತು ಪರಿಹಾರವನ್ನು ಪಡೆಯಲು ಸೌಲಭ್ಯವನ್ನು ಒದಗಿಸಿವೆ. ರೈತರು ತಮ್ಮ ಸಮಸ್ಯೆಗಳನ್ನು ನೇರವಾಗಿ ಪೋರ್ಟಲ್‌ನಲ್ಲಿ ನೋಂದಾಯಿಸಬಹುದು ಮತ್ತು ತ್ವರಿತ ಮಾಹಿತಿ ಮತ್ತು ಪರಿಹಾರಗಳನ್ನು ಪಡೆಯಬಹುದು.
ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಫಲಾನುಭವಿಯ ಸ್ಥಿತಿ
ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ.
‘ನೋ ಯುವರ್ ಸ್ಟೇಟಸ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆ, ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ‘ಡೇಟಾ ಪಡೆಯಿರಿ’ ಆಯ್ಕೆಯನ್ನು ಆರಿಸಿ.
ನಿಮ್ಮ ಸ್ಥಿತಿ ಗೋಚರಿಸುತ್ತದೆ.
ಫಲಾನುಭವಿಗಳ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಿ:
ಪಿಎಂ ಕಿಸಾನ್‌ನ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ.
‘ಫಲಾನುಭವಿಗಳ ಪಟ್ಟಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆಮಾಡಿ.
‘Get Report’ ಮೇಲೆ ಕ್ಲಿಕ್ ಮಾಡಿ.
ಇದರ ನಂತರ ಫಲಾನುಭವಿಗಳ ಪಟ್ಟಿ ಕಾಣಿಸಿಕೊಳ್ಳುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 155261 ಮತ್ತು 011-24300606 ಅನ್ನು ಸಂಪರ್ಕಿಸಬಹುದು.
पीएम-किसान की 21वीं किस्त का हस्तांतरण दिनांक-19 नवंबर 2025 कृपया लिंक पर क्लिक करें और अभी रजिस्टर करें। https://t.co/FZC9A899rx
PM-Kisan’s 21st installment will be released on 19th November 2025. Please click the link and register now. 📷https://t.co/FZC9A899rx #AgriGoI pic.twitter.com/DdHR2sJopu
— PM Kisan Samman Nidhi (@pmkisanofficial) November 14, 2025








