ದಕ್ಷಿಣಕನ್ನಡ : ಜಿಲ್ಲೆಯ ಬಂಟ್ವಾಳದಲ್ಲಿ ಫುಟ್ ಪಾತ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಎರಡು ಟ್ಯಾಂಕರ್ ಹಾಗೂ ಆಟೋರಿಕ್ಷಾ ಕಾರಿನ ಮಧ್ಯ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಟ್ಯಾಂಕರ್ ಹಿಂದೆ ಕಾರು ಹಾಗು ಆಟೋರಿಕ್ಷಾ ನಿಂತಿದ್ದವು. ಈ ವೇಳೆ ಹಿಂದಿನಿಂದ ಬಂದು ಮತ್ತೊಂದು ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದಿದೆ.
ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಎದುರಿಗೆ ನಿಂತಿದ್ದ ಕಾರಿಗೆ ಗುದ್ದಿದೆ. ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ. ಆಟೋರಿಕ್ಷಾ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








