ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ನಮ್ಮ ನಾಡು ಪತ್ರಿಕೆಯ ಸುದ್ದಿ ಸಂಪಾದಕರಾದಂತ ದೇಶಾದ್ರಿ ಹೊಸ್ಮನೆ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ಯ ಶಿವಮೊಗ್ಗ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ದೇಶಾದ್ರಿ ಹೊಸ್ಮನೆ ಅವರನ್ನು ನೇಮಕ ಮಾಡಿರುವುದಾಗಿ ಜಿಲ್ಲಾಧ್ಯಕ್ಷರಾದಂತ ಹೆಚ್.ಯು ವೈದ್ಯನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ ಘೋಷಿಸಿದ್ದಾರೆ.
ದೇಶಾದ್ರಿ ಹೊಸ್ಮನೆ ಅವರು ಕನ್ನಡ ಪ್ರಭ, ಸಮಯ ಟಿವಿ, ಉದಯ ನ್ಯೂಸ್, ಸಿನಿ ಲಹರಿಯನ್ನು ಕೆಲಸ ಮಾಡಿದಂತ ಅನುಭವ ಹೊಂದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರವು ದೇಶಾದ್ರಿ ಹೊಸ್ಮನೆ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಮಿತಿಗೆ ಸದಸ್ಯರನ್ನಾಗಿ ನೇಮಿಸಿ ಆದೇಶಿಸಿತ್ತು.
ಇದೀಗ ದೇಶಾದ್ರಿ ಹೊಸ್ಮನೆ ಅವರು ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹೀಗೆ ನೇಮಕಗೊಂಡಂತ ದೇಶಾದ್ರಿ ಹೊಸ್ಮನೆ ಅವರಿಗೆ ಕನ್ನಡ ನ್ಯೂಸ್ ನೌ ಹೃತ್ಪೂರ್ವಕ ಅಭಿನಂದನೆ, ಶುಭಾಶಯವನ್ನು ತಿಳಿಸುತ್ತದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ‘ದೀಪಕ್ ಸಾಗರ್’ ನೇಮಕ
Drinking Water: ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳಿಗೆ ಹಾನಿಯಾಗುತ್ತಾ? ವಿಜ್ಞಾನ ಹೇಳೋದೇನು ಓದಿ!








