ಬೆಂಗಳೂರು: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.
ಪರೀಕ್ಷೆ ನಡೆದು ದಾಖಲೆಯ ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಲಾಗಿದೆ. ಫಲಿತಾಂಶ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಫಲಿತಾಂಶ ಈ ರೀತಿ ಚೆಕ್ ಮಾಡಿ
ಕೆಸೆಟ್ ಪರೀಕ್ಷೆ ಬರೆದಂತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ cetonline.karnataka.gov.in/kea/ಜಾಲತಾಣಕ್ಕೆ ಭೇಟಿ ನೀಡಿ. ಅಲ್ಲಿ ಕೇಳುವಂತ ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ನಿಮ್ಮ ಕೆಸೆಟ್ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
#Kset-25: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಿರುವುದು ಇದೇ ಮೊದಲು.
ನಿಗದಿತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಫಲಿತಾಂಶ ಪಡೆಯಬಹುದು. ಆಕ್ಷೇಪಣೆಗಳು… pic.twitter.com/icBgQNJsRH
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 15, 2025
‘ಶಿವಮೊಗ್ಗ KUWJ ಸಂಘ’ದ ಜಿಲ್ಲಾಧ್ಯಕ್ಷರಾಗಿ ವೈದ್ಯನಾಥ್ ನೇಮಕ: ಹೀಗಿದೆ ನೂತನ ‘ಜಿಲ್ಲಾ ಕಾರ್ಯಕಾರಿ ಸಮಿತಿ’ ಪಟ್ಟಿ








