ಬೆಂಗಳೂರು: ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆಗೆ ಚರ್ಚಿಸಿದರು. ಈ ವೇಳೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಅವರ ಜೊತೆಗೆ ಚರ್ಚಿಸಿ ಪುನಾರಚನೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗೋದು ಫಿಕ್ಸ್ ಆದಂತೆ ಆಗಿದೆ. ಜೊತೆ ಜೊತೆಗೆ 8 ರಿಂದ 12 ಸಚಿವರು ಹೊರಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ಸುದ್ದಿ ಹಬ್ಬಿತ್ತು. ಬಿಹಾರದಲ್ಲಿ ಮಹಾಘಟಬಂಧನ್ ಹೀನಾಯ ಸೋಲು ಕಂಡ ಬಳಿಕ ಇದಕ್ಕೆ ಅವಕಾಶವಿಲ್ಲ ಎಂದೇ ಹೇಳಲಾಗುತ್ತಿತ್ತು. ಆದರೇ ಇತ್ತೀಚಿನ ಮಾಹಿತಿಯಂತೆ ಸಿಎಂ ಸಿದ್ಧರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿಯ ವೇಳೆಯಲ್ಲಿ ರಾಜ್ಯ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ ವೇಣುಗೋಪಾಲ್ ಅವರೊಂದಿಗೆ ಯಾರನ್ನು ಸಂಪುಟದಿಂದ ಔಟ್ ಮಾಡೋದು, ಯಾರನ್ನು ಇನ್ ಮಾಡಿಕೊಳ್ಳೋದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಸಂಪುಟ ಪುನಾರಚನೆಯ ಪಟ್ಟಿ ಫೈನಲ್ ಮಾಡಿ, ಕಾಂಗ್ರೆಸ್ ಹೈಕಮಾಂಡ್ ನಿಂದ ಒಪ್ಪಿಗೆ ಪಡೆದು, ಪ್ರಕಟಿಸೋ ಸಾಧ್ಯತೆ ಇದೆ.
ನ.18ರಂದು ಸಾಗರದ ತಾಳಗುಪ್ಪದಲ್ಲಿ ಸಚಿವ ಮಧು ಬಂಗಾರಪ್ಪ ಜನಸ್ಪಂದನ ಕಾರ್ಯಕ್ರಮ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ
Drinking Water: ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳಿಗೆ ಹಾನಿಯಾಗುತ್ತಾ? ವಿಜ್ಞಾನ ಹೇಳೋದೇನು ಓದಿ!








