ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ.16ರಂದು ಭಾನುವಾರ ಸಂಜೆ 6ಕ್ಕೆ ಮಂಡ್ಯದಲ್ಲಿ ರಾಷ್ಟ್ರೀಯ ಮಾಧ್ಯಮ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ ಅಂಶಿ ಪ್ರಸನ್ನಕುಮಾರ್ ಅವರು ಉಪನ್ಯಾಸ ನೀಡಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಬಳಿಕ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ.
ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ‘ದೀಪಕ್ ಸಾಗರ್’ ನೇಮಕ
ನ.18ರಂದು ಸಾಗರದ ತಾಳಗುಪ್ಪದಲ್ಲಿ ಸಚಿವ ಮಧು ಬಂಗಾರಪ್ಪ ಜನಸ್ಪಂದನ ಕಾರ್ಯಕ್ರಮ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ








